Home ನಮ್ಮ ಜಿಲ್ಲೆ ಚಿಕ್ಕಮಗಳೂರು ವಿದ್ಯುತ್ ಶಾಕ್: 7ನೇ ತರಗತಿ ಬಾಲಕ ಸಾವು

ವಿದ್ಯುತ್ ಶಾಕ್: 7ನೇ ತರಗತಿ ಬಾಲಕ ಸಾವು

0

ಚಿಕ್ಕಮಗಳೂರು : ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾವಪ್ಪಿರುವ ದುರಂತ ಘಟನೆ ನಡೆದಿದೆ
ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಆಕಾಶ್ (13) ಮೃತ ದುರ್ದೈವಿ ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆ ಆವರಣದ ನೇರಳೆ ಮರದಲ್ಲಿ ಹಣ್ಣು ಕೀಳಲು ಮರ ಹತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.

ನೇರಳೆ ಹಣ್ಣು ಕೀಳಲು ಮೂವರು ವಿದ್ಯಾರ್ಥಿಗಳು ಮರ ಹತ್ತಿದ್ದರು ಮರದಿಂದ ಜಾರಿ ಬೀಳುವಾಗ ವಿದ್ಯುತ್ ತಂತಿ ಹಿಡಿದ ಬಾಲಕ ವಿದ್ಯುತ್ ಶಾಕ್ ನಿಂದ ಕೆಳಗೆ ಬಿದ್ದ ಬಾಲಕನ ಆಸ್ಪತ್ರೆಗೆ ದಾಖಲು ಮಾಡಿದ್ದು,ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ‌. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Exit mobile version