ಬೆಂಗಳೂರು: ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ 11 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಘೋಷಿಸಿದ್ದಾರೆ.
ಕಾಂಗ್ರೆಸ್‌ನಿಂದ 7, ಬಿಜೆಪಿಯಿಂದ 3, ಜೆಡಿಎಸ್‌ನಿಂದ 1 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನಿಂದ ಬೋಸರಾಜು, ಐವಾನ್ ಡಿಸೋಜಾ, ವಸಂತ್ ಕುಮಾರ್, ಬಿಲ್ಕೀಸ್ ಬಾನು, ಜಗದೇವ್ ಗುತ್ತೇದಾರ್, ಗೋವಿಂದ್ ರಾಜು, ಯತೀಂದ್ರ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ.
ಬಿಜೆಪಿಯಿಂದ ಸಿ.ಟಿ. ರವಿ, ರವಿಕುಮಾರ್, ಎಂ.ಜಿ. ಮೂಳೆ ಆಯ್ಕೆ ಆಗಿದ್ದು, ಜೆಡಿಎಸ್‌ನಿಂದ ಜವರಾಯೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.