ಬೆಂಗಳೂರು: ಸಿದ್ದರಾಮಯ್ಯ ಅವರು ವಿಧಾನಸೌಧದ ಮೆಟ್ಟಿಲುಗಷ್ಟೇ ಮುಖ್ಯಮಂತ್ರಿಯೇ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಆರ್‌ಸಿಬಿ ಅಭಿಮಾನಿಗಳ ಕಾಲ್ತುಳಿತ ಪ್ರಕರಣ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಆರ್ಸಿಬಿ ವಿಜಯೋತ್ಸವದಲ್ಲಿ ಯಾರೂ ಸಾಯಲಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧದ ಮೆಟ್ಟಿಲುಗಷ್ಟೇ ಮುಖ್ಯಮಂತ್ರಿಯೋ, ದಯವಿಟ್ಟು ಹೇಳುವಿರಾ, ದುರಂತದ ಹೊಣೆಯನ್ನು ಪೊಲೀಸರ ಮೇಲೆ ಎತ್ತಿಹಾಕಿ ‘ಕೈ’ ತೊಳೆದುಕೊಳ್ಳುವುದು ಎಷ್ಟು ಸರಿ, ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ, ಉತ್ತರಿಸಿ ಮೆಟ್ಟಿಲು ಮುಖ್ಯಮಂತ್ರಿಗಳೇ ಎಂದಿದ್ದಾರೆ.