ಬೆಂಗಳೂರು: ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಬಿ ಫಾರಂ ವಿತರಣೆ ಮಾಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಕೆ ಮಂಜುನಾಥ್ ಕುಮಾರ್, ಮರಿತಿಬ್ಬೇಗೌಡ, ಆಯನೂರು ಮಂಜುನಾಥ್ ಹಾಗೂ ಡಾ. ಚಂದ್ರಶೇಖರ ಪಾಟೀಲ್ ಅವರಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಬಿ ಫಾರಂ ನೀಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಅಭ್ಯರ್ಥಿಗಳ ವಿವರ: ನೈಋತ್ಯ ಶಿಕ್ಷಕರ ಕ್ಷೇತ್ರ – ಕೆ.ಕೆ. ಮಂಜುನಾಥ್, ದಕ್ಷಿಣ ಶಿಕ್ಷಕರ ಕ್ಷೇತ್ರ – ಮರತಿಬ್ಬೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿ.ಟಿ.ಶ್ರೀನಿವಾಸ್, ಈಶಾನ್ಯ ಪದವೀಧರ ಕ್ಷೇತ್ರ – ಡಾ.ಚಂದ್ರಶೇಖರ ಪಾಟೀಲ, ನೈಋತ್ಯ ಪದವೀಧರ ಕ್ಷೇತ್ರ – ಆಯನೂರು ಮಂಜುನಾಥ್, ಬೆಂಗಳೂರು ಪದವೀಧರ ಕ್ಷೇತ್ರ – ರಾಮೋಜಿ