Home News ವಿಧಾನ ಪರಿಷತ್ ಚುನಾವಣೆ: ಮೈತ್ರಿಗೆ ಎಷ್ಟು ಸ್ಥಾನ..?

ವಿಧಾನ ಪರಿಷತ್ ಚುನಾವಣೆ: ಮೈತ್ರಿಗೆ ಎಷ್ಟು ಸ್ಥಾನ..?

ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಏರ್ಪಟ್ಟಿರುವ ಮೈತ್ರಿಯನ್ನು ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಮುಂದುವರೆಸಲಾಗುವುದು

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಬೇಕಾದರೆ ಸಿಬಿಐಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಏರ್ಪಟ್ಟಿರುವ ಮೈತ್ರಿಯನ್ನು ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಮುಂದುವರೆಸಲಾಗುವುದು. ಜೆಡಿಎಸ್‌ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತೇವೆ ಯಾವ ಕ್ಷೇತ್ರ ಬಿಟ್ಟು ಕೊಡಬೇಕು ಎಂಬುದರ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಇಂದು ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ, ರಾಜ್ಯದಲ್ಲಿ ಬೀಕರ ಬರಗಾಲ ಬಂದಿದೆ. ರಾಜ್ಯಾದ್ಯಂತ ನೂರಾರು ಕೆರೆಕಟ್ಟೆಗಳು ಬತ್ತಿಹೋಗಿವೆ. ತೀವ್ರ ಬರಗಾಲವು ಜನರನ್ನು ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲಮನ್ನ ಮಾಡಿ ರೈತರಿಗೆ ನೆರವಾಗಬೇಕು. ಬರಗಾಲದಿಂದ ತ್ತರಿಸಿರುವ ರೈತರ ಸಾಲ ಮನ್ನಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ, ನರೇಂದ್ರ ಮೋದಿಯವರು 400ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಪ್ರಧಾನಿಯಾಗುತ್ತಾರೆ. ಸೂರ್ಯ-ಚಂದ್ರ ಇರೋದು ಎಷ್ಟು ಸತ್ಯವೋ ಇದು ಅಷ್ಟೇ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಮೋದಿಯವರು (Narendra Modi) ಈಗಲೇ ಚಿಂತೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ಕನಿಷ್ಠ 24-25 ಸ್ಥಾನ ಗೆಲ್ಲುತ್ತೇವೆ. ಕಾಂಗ್ರೆಸ್‌ನವರು ಏನೇ ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.

Exit mobile version