Home ತಾಜಾ ಸುದ್ದಿ ವಿಧಾನ ಪರಿಷತ್: ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

ವಿಧಾನ ಪರಿಷತ್: ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

0

ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಸುಲಭ ಗೆಲುವು ಸಾಧಿಸಿದೆ.
ಕೋಟ ಶ್ರೀನಿವಾಸ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಧಾನಪರಿಷತ್‌ನ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆಗೆ ಅಕ್ಟೋಬರ್ 21ರಂದು ಮತದಾನ ನಡೆದಿತ್ತು.

Exit mobile version