ಬೆಂಗಳೂರು: ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಬಲಿಯಾಗಿರುವುದು ಈ ರಾಜ್ಯದಲ್ಲಿ ಕಾಂಗ್ರೆಸ ಸರ್ಕಾರ ಹೇಗೆ ಅಧಿಕಾರ ದುರುಪಯೋಗ ಪಡೆದು ಕೊಳ್ಳುತ್ತಿದ್ದೆ ಎಂಬುದನ್ನು ತೋರಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಕೊಡಗಿನ ಬಿಜೆಪಿ ಕಾರ್ಯಕರ್ತರಾದ ವಿನಯ್ ಆತ್ಮಹತ್ಯೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಕಾಂಗ್ರೆಸ್ ಶಾಸಕ ತನ್ನ ಅಧಿಕಾರ ದುರುಪಯೋಗ ಪಡಿಸಿಕೊಂಡು ಎಫ್ ಐ ಆರ್ ದಾಖಲಿಸಿ, ಕಿರುಕುಳದ ಜೊತೆ ಸೌಹಾರ್ದಕ್ಕೆ ಧಕ್ಕೆ ತರುವ ಕೆಲಸ ಮಾಡಲು ಮುಂದಾಗಿರುವುದು ನಿಜಕ್ಕೂ ದುರಂತ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯ ಕಿರುಕುಳ, ಒತ್ತಡ, ದೌರ್ಜನ್ಯಗಳು ನಡೆಯುತ್ತಿದ್ದು ಈ ನಿಟ್ಟಿನಲ್ಲಿ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯು ಅತ್ಯಂತ ಪಾರದರ್ಶಕವಾಗಿ ನಡೆಯಬೇಕೆಂದು ಆಗ್ರಹಿಸುತ್ತೇನೆ.
ರಾಜಕೀಯ ಕಾರಣಗಳು ಹಾಗೂ ಒತ್ತಡಗಳ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಎಫ್ಐಆರ್ ನಿಂದಾಗಿ ವಿನಯ್ ಆತ್ಮಹತ್ಯೆಗೆ ಶರಣಾಗಿರಬಹುದಾದ ಸಾಧ್ಯತೆ ಮೇಲ್ನೋಟಕ್ಕೆ ಕಾಣುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯ ಕಿರುಕುಳ, ಒತ್ತಡ, ದೌರ್ಜನ್ಯಗಳು ನಡೆಯುತ್ತಿವೆ. ಮೃತ ಕಾರ್ಯಕರ್ತ ವಿನಯ್ ಅವರ ನಿಧನದ ನೋವಿನಲ್ಲಿರುವ ಕುಟುಂಬ ವರ್ಗದವರಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ವಿನಯ್ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.