ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಪಟ್ಟಂತೆ ತೀರ್ಪು ಆಗಸ್ಟ್ 16, ರಾತ್ರಿ 9.30 ರವರೆಗೆ ವಿಸ್ತರಣೆ ಮಾಡಲಾಗಿದೆ. ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಜಂಟಿ ಬೆಳ್ಳಿ ಪದಕವನ್ನು ನೀಡಬೇಕೆಂದು ವಿನೇಶ್ ಫೋಗಟ್ ಮನವಿ ಸಲ್ಲಿಸಿದ್ದಾರೆ. ಈ ಮನವಿ ಮೇಲಿನ ತೀರ್ಪು ಕೊಡಲು ಕ್ರೀಡಾ ನ್ಯಾಯ ಮಂಡಳಿ (ಸಿಎಎಸ್) ತಾತ್ಕಾಲಿಕ ವಿಭಾಗವು ಮತ್ತೆ ವಿಸ್ತರಣೆ ಮಾಡಿದೆ. ಆಗಸ್ಟ್ 16 ರಂದು ಸ್ಥಳೀಯ ಕಾಲಮಾನ 6 ಗಂಟೆಗೆ ತೀರ್ಪು ನೀಡುವುದಾಗಿ ಹೇಳಿದೆ.
ಪ್ಯಾರಿಸ್ ಒಲಿಂಪಿಕ್ಸ್ 2024 ಮುಗಿಯುವ ಮೊದಲು ಆ.10 ರಂದು ತೀರ್ಪು ಪ್ರಕಟಿಸುವುದಾಗಿ ಹೇಳಿತ್ತು. ನಂತರ ಆ.13 ರಂದು ಪ್ರಕಟಿಸಲಾಗುವುದು ಎಂದಿತ್ತು. ಆದರೆ ಈಗ ಮೂರನೇ ಬಾರಿ ಮುಂದೂಡಿದ್ದು, ಆ.16 ರಂದು ಪ್ರಕಟಿಸುವುದಾಗಿ ಹೇಳಿದೆ.