ವಿನೇಶ್​ ಫೋಗಟ್ ಫೈನಲ್ ತಲುಪಿದ್ದೇ ಹೆಮ್ಮೆಯ ವಿಷಯ

0
5

ನವದೆಹಲಿ: ವಿನೇಶ್ ಫೋಗಟ್ ಒಲಿಂಪಿಕ್ ಪದಕ ಗೆಲ್ಲುವ ಅವರ ಕನಸು ಈಡೇರಲಿಲ್ಲ, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಫೈನಲ್‌ಗೆ ಪ್ರವೇಶಿಸಿದ ಭಾರತದ ಮೊದಲ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದು ನಮ್ಮ ಪಾಲಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ಯಾರಿಸ್ ಒಲಿಂಪಿಕ್ ಕೂಟದಲ್ಲಿ ಸ್ಪರ್ಧಿಸಿ ತವರಿಗೆ ಮರಳಿರುವ ಭಾರತದ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ಸಂವಾದ ನಡೆಸಿದರು. ನಂತರ ಮೋದಿ ಅವರಿಗೆ ಭಾರತೀಯ ಒಲಿಂಪಿಕ್ ಜರ್ಸಿಯನ್ನು ಉಡುಗೊರೆಯಾಗಿ ನೀಡಲಾಯಿತು. ಅದರಲ್ಲಿ ಎಲ್ಲಾ ಭಾರತೀಯ ಹಾಕಿ ತಂಡದ ಸದಸ್ಯರ ಸಹಿ ಮತ್ತು ವಿಶೇಷ ಹಾಕಿ ಸ್ಟಿಕ್ ಇತ್ತು. ಪ್ಯಾರಿಸ್ ಗೇಮ್ಸ್‌ನಲ್ಲಿ ತನ್ನ ಪ್ರದರ್ಶನದಿಂದ ಎಲ್ಲರ ಮನ ಗೆದ್ದಿರುವ ಮನು ಭಾಕರ್, ಪ್ರಧಾನಮಂತ್ರಿಗೆ ವಿಶೇಷವಾಗಿ ವಿನ್ಯಾಸಗೊಳಿಸಿದ ಏರ್ ಪಿಸ್ತೂಲ್ ಅನ್ನು ಉಡುಗೊರೆಯಾಗಿ ನೀಡಿದರು. ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಸಹ ಪ್ರಧಾನಿಗೆ ಸಹಿ ಮಾಡಿದ ಜೆರ್ಸಿಯನ್ನು ನೀಡಿದರು.

Previous articleಅವ್ಯವಹಾರದಿಂದ ಕಿಮ್ಸ್ ಹೆಸರಿಗೆ ಮಸಿ ಬಳಿದರೆ ಮುಲಾಜಿಲ್ಲದೇ ಕ್ರಮ
Next articleರಾಷ್ಟ್ರೀಯ ಬ್ಯಾಂಕ್‌ಗಳನ್ನ ಏಕಾಏಕಿ ನಿಷೇಧಿಸುವುದು ಎಷ್ಟು ಸರಿ?