ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಅನಾರೋಗ್ಯದಿಂದಾಗಿ ಥಾಣೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
52 ವರ್ಷದ ವಿನೋದ್ ಕಾಂಬ್ಳಿ ಕಳೆದ ಕೆಲವು ವರ್ಷಗಳಿಂದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗನ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಹೇಳಲಾಗಿದ್ದರೂ ಅವರ ಸ್ಥಿತಿ ಇನ್ನೂ ಗಂಭೀರವಾಗಿದೆ. ಏಕಾಏಕಿ ಕಾಂಬ್ಳಿಗೆ ಏನಾಯಿತು ಎಂಬ ಸಂಪೂರ್ಣ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಶನಿವಾರ ರಾತ್ರಿ ಮಾಜಿ ಕ್ರಿಕೆಟಿಗರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಬಿಮಾನಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದು, ವೈರಲ್ ಆಗಿರುವ ವಿಡಿಯೋದಲ್ಲಿ ಕಾಂಬ್ಳಿ ಆಸ್ಪತ್ರೆಯ ಬೆಡ್ ಮೇಲೆ ಇದ್ದಾರೆ.