Home ನಮ್ಮ ಜಿಲ್ಲೆ ಉತ್ತರ ಕನ್ನಡ ವಿಪ ಮಾಜಿ ಸದಸ್ಯೆ ಶುಭಲತಾ ಅಸ್ನೋಟಿಕರ ವಿಧಿವಶ

ವಿಪ ಮಾಜಿ ಸದಸ್ಯೆ ಶುಭಲತಾ ಅಸ್ನೋಟಿಕರ ವಿಧಿವಶ

0

ಕಾರವಾರ: ವಿಧಾನ ಪರಿಷತ್ ಮಾಜಿ ಸದಸ್ಯೆ ಶುಭಲತಾ ಅಸ್ನೋಟಿಕರ್(೬೭) ಬುಧವಾರ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.
ಕಳೆದ ಕೆಲ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಕಿಡ್ನಿ ಸಮಸ್ಯೆ ಸೇರಿದಂತೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ತಾಯಿ ಅನಾರೋಗ್ಯದ ಹಿನ್ನಲೆಯಲ್ಲಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕೂಡ ಜೊತೆಯಲ್ಲಿಯೇ ವಾಸವಾಗಿದ್ದರು. ಶುಭಲತಾ ಅಸ್ನೋಟಿಕರ್ ಅಂತ್ಯಸಂಸ್ಕಾರ ಗುರುವಾರ ನಡೆಯಲಿದೆ. ಪತಿ ವಸಂತ್ ಅಸ್ನೊಟಿಕರ್ ಶಾಸಕರಾಗಿದ್ದಾಗ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದರು. ಬಳಿಕ ಶುಭಲತಾ ಅಸ್ನೋಟಿಕರ್ ವಿಧಾನ ಪರಿಷತ್ ಸದಸ್ಯೆಯಾಗಿದ್ದರು. ನಂತರ ಆನಂದ್ ಅಸ್ನೋಟಿಕರ್ ಶಾಸಕರಾಗಿ ಸಚಿವರಾದರು. ಮಗನ ಆಡಳಿತದ ಬಳಿಕವೂ ಹಳ್ಳಿಹಳ್ಳಿಗೂ ತೆರಳಿ ಪತಿಯ ಹೆಸರಿನಲ್ಲಿ ಹಲವು ಜನಪರ ಕಾರ್ಯಗಳನ್ನು ಕೈಗೊಂಡಿದ್ದರು.

Exit mobile version