Home News ವಿಭಾಗೀಯ ನಿಯಂತ್ರಣಾಧಿಕಾರಿ ಮೇಲೆ ಅಟ್ರಾಸಿಟಿ ಪ್ರಕರಣ

ವಿಭಾಗೀಯ ನಿಯಂತ್ರಣಾಧಿಕಾರಿ ಮೇಲೆ ಅಟ್ರಾಸಿಟಿ ಪ್ರಕರಣ

ಯಾದಗಿರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಯಾದಗಿರಿ ವಿಭಾಗೀಯ ನಿಯಂತ್ರಣಾಧಿಕಾರಿ ಸುನೀಲಕುಮಾರ ಚಂದರಗಿ ವಿರುದ್ಧ ಸಾರಿಗೆ ನೌಕರನೋರ್ವನ ದೂರಿನ ಮೇರೆಗೆ ಇಲ್ಲಿನ ನಗರ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ಸುರಪುರ ಡಿಪೋದಲ್ಲಿ ಚಾಲಕ ಕಂ ನಿರ್ವಾಹಕರಾಗಿರುವ ರಾಮಪ್ಪ ಅವರು ನೀಡಿದ ಜಾತಿ ನಿಂದನೆ, ಜೀವ ಬೆದರಿಕೆ ದೂರಿನ ಹಿನ್ನೆಲೆಯಲ್ಲಿ ಚಂದರಗಿ ವಿರುದ್ಧ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣದ ವಿವರ:
ಇತ್ತೀಚೆಗೆ ಚಾಲಕ ಕಂ ನಿರ್ವಾಹಕರಾಗಿರುವ ರಾಮಪ್ಪ ಅವರನ್ನು ಅಮಾನತು ಮಾಡಲಾಗಿತ್ತು. ಹೀಗಾಗಿ ಕಳೆದ ಏಪ್ರಿಲ್ 7ರಂದು ರಾಮಪ್ಪ ಯಾದಗಿರಿ ಹಳೆ ಬಸ್ ನಿಲ್ದಾಣದಲ್ಲಿರುವ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಗೆ ಹೋಗಿ ನನಗೆ ನಿಯಮಬಾಹಿರವಾಗಿ ಅಮಾನತು ಮಾಡಲಾಗಿದ್ದು, ಕೆಲಸ ನಿರ್ವಹಿಸಲು ಅವಕಾಶ ಕೋರಿದ್ದಾರೆ. ಆದರೆ, ಚಂದರಗಿ, ಇದಕ್ಕೆ ಮನ್ನಣೆ ನೀಡಿದೆ ಜಾತಿ ನಿಂದಿಸಿ ಹತ್ತು ರೌಡಿಗಳನ್ನು ಕರೆಸಿ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ರಾಮಪ್ಪ ದೂರು ನೀಡಿದ್ದಾರೆ ಎನ್ನಲಾಗಿದೆ.

Exit mobile version