ಬೆಂಗಳೂರು: ಇಂದು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧದ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ವಿಜಯ ಮಲ್ಯ ಆರ್ಸಿಬಿ ತಂಡಕ್ಕೆ ಶುಭಕೋರಿದ್ದಾರೆ,
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ನಾನು ಆರ್ಸಿಬಿ ಫ್ರಾಂಚೈಸಿ ಖರೀದಿಗಾಗಿ ಬಿಡ್ ಮಾಡಿದಾಗ ಮತ್ತು ವಿರಾಟ್ ಕೊಹ್ಲಿಗಾಗಿ ಬಿಡ್ ಮಾಡಿದಾಗ, ಇದಕ್ಕಿಂತ ಉತ್ತಮ ಆಯ್ಕೆಗಳಿಲ್ಲ ಎಂದು ನನ್ನ ಒಳ ಮನಸ್ಸು ಹೇಳುತ್ತಿತ್ತು. ಇದೀಗ ಆರ್ಸಿಬಿ ತಂಡಕ್ಕೆ ಟ್ರೋಫಿ ಗೆಲ್ಲಲು ಉತ್ತಮ ಅವಕಾಶವಿದೆ ಎಂದು ನನ್ನ ಒಳ ಮನಸ್ಸು ಹೇಳ್ತಿದೆ. ಯಾವುದೇ ಚಿಂತೆಯಿಲ್ಲದೆ ಮುನ್ನುಗ್ಗಿ. ಬೆಸ್ಟ್ ಆಫ್ ಲಕ್ ಎಂದು ತಂಡಕ್ಕೆ ಶುಭಕೋರಿದ್ದಾರೆ.