ವಿವಾದ ಹುಟ್ಟುಹಾಕುವುದರಲ್ಲಿ ಸಿದ್ದರಾಮಯ್ಯ ಎತ್ತಿದ ಕೈ

0
18

ಹುಬ್ಬಳ್ಳಿ: ಹೊಸ ವಿವಾದ ಹುಟ್ಟು ಹಾಕುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎತ್ತಿದ ಕೈ. ಉದ್ದೇಶ ಪೂರ್ವಕವಾಗಿಯೇ ಹಿಜಾಬ್ ವಿಚಾರ ಕುರಿತಂತೆ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಗೆ ಶೋಭೆ ತರುವ ವಿಚಾರವಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಎಲ್ಲೂ ಹಿಜಾಬ್ ನಿಷೇಧ ಆಗಿಲ್ಲ. ಕೇವಲ ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಕಾಪಾಡುವ ನಿಟ್ಟಿನಲ್ಲಿ ಹಿಜಾಬ್ ಧರಿಸದಂತೆ ಆದೇಶಿಸಲಾಗಿತ್ತು. ಆದರೆ, ಮುಖ್ಯಮಂತ್ರಿ ಗೊಂದಲ ಸೃಷ್ಟಿಸಿದ್ದಾರೆ.
ಹಿಂದೆ ರಾಹುಲ್ ಗಾಂಧಿ ಜನಿವಾರ ಹಾಕಿಕೊಂಡು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ದೇಶದ ಬಜೆಟ್ ಮೇಲೆ ಮುಸಲ್ಮಾನರಿಗೆ ಮೊದಲ ಹಕ್ಕಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದರು. ಈಗ ಸಿದ್ದರಾಮಯ್ಯ ಮುಸ್ಲಿಮರಿಗೆ ೧೦ ಸಾವಿರ ಕೋಟಿ ಅನುದಾನ ಕೊಡುವುದಾಗಿ ಹೇಳುತ್ತಾರೆ. ಇದೆಲ್ಲವೂ ಓಲೈಕೆಗಾಗಿ ಮಾತ್ರ ಎಂದು ಹೇಳಿದರು.

Previous articleಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕನಾಗಿ ಅರವಿಂದ್ ಬೆಲ್ಲದ್‌ ನೇಮಕ
Next articleಹಂಪಿಗೆ ಪ್ರವಾಸಿಗರ ದಂಡು…