ವಿವಿಧ ಹಗರಣಗಳ ತನಿಖೆ ಚುರುಕು: 2 ತಿಂಗಳ ಡೆಡ್‌ಲೈನ್‌

0
16

ಐವರು ಸಚಿವರ ಸಮಿತಿ ರಚನೆ

ಬೆಂಗಳೂರು: ವಿವಿಧ ಹಗರಣಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಐವರು ಸಚಿವರ ಸಮಿತಿ ರಚಿಸಿದೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಯ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮವಹಿಸಲು ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದ ಸಮಿತಿ ರಚಿಸಿದ್ದಾರೆ. ಸಮಿತಿಯಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತು ಸಂತೋಷ್ ಲಾಡ್ ಅವರನ್ನೊಳಗೊಂಡ ಸಮಿತಿಯನ್ನು ರಚಿಸಿ, ಆದೇಶಿಸಲಾಗಿದೆ. ಈ ಸಮಿತಿಯು ಮುಂದಿನ ಎರಡು ತಿಂಗಳುಗಳ ಒಳಗೆ ತನಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಕೋರಲಾಗಿದೆ ಎಂದಿದ್ದಾರೆ.

Previous articleಸಾಕು ನಾಯಿ ಕಸ ವಿಲೇ ವಾಹನಕ್ಕೆ : ಪ್ರಾಣಿ ಪ್ರಿಯರ ಆಕ್ರೋಶ..!
Next articleಸೈಬರ್ ಅಪರಾಧ ತಡೆಗೆ ನಟ ಅಮಿತಾಬ್ ಬಚ್ಚನ್ ಸಾಥ್