ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 4 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಫೈನಲ್ ಪ್ರವೇಶಿಸಿದೆ.
ದುಬೈನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ್ದ 265 ರನ್‌ಗಳ ಗುರಿಯನ್ನ 11 ಎಸೆತಗಳು ಬಾಕಿ ಇರುವಂತೆಯೇ ಭಾರತ ಗೆಲುವು ಸಾಧಿಸಿತು. ಈ ಮೂಲಕ ಸತತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಫೈನಲ್ ಪ್ರವೇಶಿಸಿದೆ. ಅಲ್ಲದೇ 2023ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೋಲಿಗೆ ಭಾರತ ಸೇಡು ತೀರಿಸಿಕೊಂಡಿದೆ.
ಭಾರತ ತಂಡದ ಪರ ವಿರಾಟ್ ಕೊಹ್ಲಿ(84), ಶ್ರೇಯಸ್ ಅಯ್ಯರ್ (45) ಮತ್ತು ಕನ್ನಡಿಗ ಕೆಎಲ್ ರಾಹುಲ್ (ಅಜೇಯ 42) ರನ್‌ಗಳ ಕಾಣಿಕೆ ನೀಡಿದರು.