Home News ವಿಶ್ವಗುರು ಬಸವಣ್ಣ ಮೂರ್ತಿಗೆ ಅವಮಾನ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ವಿಶ್ವಗುರು ಬಸವಣ್ಣ ಮೂರ್ತಿಗೆ ಅವಮಾನ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಬೀದರ್ : ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಪ್ರತಿಮೆಗೆ ಅಪಮಾನ ಮಾಡಿರುವ ಹಿನ್ನೆಲೆಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆದಿದೆ.
ಭಾಲ್ಕಿ-ಹುಮನಾಬಾದ್ ಹೆದ್ದಾರಿ ಸಂಚಾರ ಸ್ಥಗಿತವಾಗಿದೆ. ಕೆಲವು ಕಿಡಿಗೇಡಿಗಳು ಬಸವಣ್ಣನವರ ಪ್ರತಿಮೆಯ ಕೈ ಮುರಿದು ಅವಮಾನಿಸಿ, ಧ್ವಜ ಕಂಬ ಕಿತ್ತೆಸೆಯಲು ಪ್ರಯತ್ನಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ ಎನ್ನಲಾಗಿದೆ, ಬುಧವಾರ ಬೆಳಿಗ್ಗೆ ಇದನ್ನು ಗಮನಿಸಿದ ಗ್ರಾಮಸ್ಥರು, ಸಾರ್ವಜನಿಕರು ಕಿಡಿಗೇಡಿಗಳ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Exit mobile version