ಮೈಸೂರು: ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ಹಾಗೂ ಗಣ್ಯರು ಪೂಜೆ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿದ್ದಾರೆ,
ತಾಯಿ ಚಾಮುಂಡಿಗೆ ಪುಪ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಆರಂಭಗೊಂಡಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇತರ ಸಚಿವರು ಭಾಗವಹಿಸಿದ್ದರು. ಇಂದಿನಿಂದ ಅಕ್ಟೋಬರ್ 12ರ ವರೆಗೆ ಮೈಸೂರು ದಸರಾ ನಡೆಯಲಿದೆ.