ವಿಷ ಸೇವಿಸಿ ರೈತ ಆತ್ಮಹತ್ಯೆ

0
15


ದಾವಣಗೆರೆ: ರೈತನೊಬ್ಬ ಸಾಲ ಮರುಪಾವತಿಸಲು ಸಾಧ್ಯವಾಗದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಗಿರಿ ತಾಲೂಕಿನ ಹಿರೇಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸುಧೀರ್(45) ಆತ್ಮಹತ್ಯೆ ಮಾಡಿಕೊಂಡ ರೈತ. 5 ಎಕರೆ ಜಮೀನು ಗುತ್ತಿಗೆ ಪಡೆದು ಕೃಷಿ ಮಾಡುತ್ತಿದ್ದ ಸುಧೀರ್‌, ಲಕ್ಷಾಂತರ ರೂಪಾಯಿ ಕೈಸಾಲ ಮಾಡಿಕೊಂಡಿದ್ದರು. ಇದನ್ನು ತೀರಿಸಲು ಸಾಧ್ಯವಾಗದೇ ಜಮೀನಿನಲ್ಲಿ ವಿಷ ಸೇವಿಸಿದ್ದರು. ಈ ಕುರಿತು ಸಂತೆಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲು ಸೇವೆ ಪುನರಾರಂಭ
Next articleಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ ಮತ್ತೇ ಸದ್ದು ಮಾಡಿದ ಪೊಲೀಸ್ ಗುಂಡು