ವೀರ ಸಾವರ್ಕರ್ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಉದ್ಘಾಟಿಸಲಿರುವ ಮೋದಿ

0
7

ಫೋರ್ಟ್ ಬ್ಲೇರ್ ನಲ್ಲಿರುವ ವಿಮಾನ ನಿಲ್ದಾಣವು ಭಾರತದ ಅತ್ಯಂತ ಸುಂದರವಾದ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪೋರ್ಟ್ ಬ್ಲೇರ್‌ನ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಜುಲೈ 18 ರಂದು ಬೆಳಿಗ್ಗೆ 10:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ.


ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದಲ್ಲಿ ₹80 ಕೋಟಿ ವೆಚ್ಚದಲ್ಲಿ ಎರಡು ಬೋಯಿಂಗ್-767-400 ಮತ್ತು ಎರಡು ಏರ್‌ಬಸ್-321 ಮಾದರಿಯ ವಿಮಾನಗಳಿಗೆ ಸೂಕ್ತವಾದ ಅಪ್ರಾನ್ ಅನ್ನು ಸಹ ನಿರ್ಮಿಸಲಾಗಿದೆ, ಇದರಿಂದಾಗಿ ವಿಮಾನ ನಿಲ್ದಾಣವು ಈಗ ಏಕಕಾಲದಲ್ಲಿ ಹತ್ತು ವಿಮಾನಗಳ ನಿಲುಗಡೆಗೆ ಸೂಕ್ತವಾಗಿದೆ.

Previous articleಸೇತುವೆ ಬಳಿ ಹಳೇ ಕಾಲದ ನಾಣ್ಯ ಪತ್ತೆ
Next articleಅಸ್ತಿತ್ವಕ್ಕಾಗಿ ಬೆಂಗಳೂರಿನಲ್ಲಿ ಪ್ರತಿಪಕ್ಷಗಳು ಶೋ ಮಾಡುತ್ತಿವೆ