ದಾವಣಗೆರೆ: ಹಾಡುಹಗಲೆ ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ, 15 ತೊಲೆ ಬಂಗಾರದ ಆಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಇಲ್ಲಿನ ಎಸ್.ಎಸ್. ಬಡಾವಣೆಯ ಎ ಬ್ಲಾಕ್‌ನಲ್ಲಿ ಶುಕ್ರವಾರ ನಡೆದಿದೆ.
ಬಡಾವಣೆಯ ನಿವಾಸಿ ರಂಗಮ್ಮ(70) ಹಲ್ಲೆಗೊಳಗಾಗಿರುವ ವೃದ್ಧೆ. ರಂಗಮ್ಮನವರ ಮಕ್ಕಳು ಮತ್ತು ಮೊಮ್ಮಕ್ಕಳು ಎಂದಿನಂತೆ ಕೆಲಸಕ್ಕೆ ಹೋಗಿದ್ದರು. ವೃದ್ಧೆಯೊಬ್ಬರೇ ಇರುವುದನ್ನು ಗಮನಿಸಿರುವ ದುಷ್ಕರ್ಮಿಗಳು ಮನೆಯ ಒಳಗೆ ನುಗ್ಗಿ ವೃದ್ಧೆಯ ಮೇಲೆ ಹಲ್ಲೆ ನಡೆಸಿ, 15 ತೊಲೆ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ. ಈ ಘಟನೆ ಹಾಡಹಗಲೆ ನಡೆದಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.
ಘಟನೆಯ ಹಿನ್ನೆಲೆಯಲ್ಲಿ ನಗರ ಡಿವೈಎಸ್ಪಿ ಶರಣಬಸವೇಶ್ವರ ಭೀಮರಾವ್ ನೇತೃತ್ವದಲ್ಲಿ ದಾವಣಗೆರೆಯ ವಿದ್ಯಾನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ದರೋಡೆಕೋರರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.