ವೃದ್ಧ ಮಾವನನ್ನು ಕೂಡಿ ಹಾಕಿ ಥಳಿಸಿದ ಸೊಸೆ

0
17

ಮಂಗಳೂರು: ವೃದ್ಧ ಮಾವನನ್ನು ಮನೆಯಲ್ಲಿ ಕೂಡಿ ಹಾಕಿ ಸೊಸೆಂ ಹಲ್ಲೆ ನಡೆಸಿದ ಘಟನೆ ನಗರದ ಕುಲಶೇಖರದಲ್ಲಿ ನಡೆದಿದ್ದು, ಪೊಲೀಸರು ಆರೋಪಿ ಸೊಸೆಯನ್ನು ಬಂಧಿಸಿದ್ದಾರೆ.
ಕುಲಶೇಖರ ನಿವಾಸಿ ಪದ್ಮನಾಭ ಸುವರ್ಣ(೭೬) ಹಲ್ಲೆಗೀಡಾದವರು. ಇವರ ಮಗ ಪ್ರೀತಂ ಸುವರ್ಣ ವಿದೇಶದಲ್ಲಿ ಕೆಲಸದಲ್ಲಿದ್ದು, ಮನೆಯ ಸಿಸಿಟಿವಿಯನ್ನು ತನ್ನ ಮೊಬೈಲಿಗೆ ಕನೆಕ್ಟ್ ಮಾಡಿಕೊಂಡಿದ್ದರು. ಎರಡು ದಿನಗಳ ಹಿಂದೆ ತನ್ನ ವೃದ್ಧ ತಂದೆಗೆ ಪತ್ನಿ, ಅತ್ತಾವರ ಮೆಸ್ಕಾಂನಲ್ಲಿ ಅಧಿಕಾರಿಯಾಗಿರುವ ಉಮಾಶಂಕರಿ ವಾಕಿಂಗ್ ಸ್ಟಿಕ್‌ನಲ್ಲಿ ಹಲ್ಲೆ ನಡೆಸಿರುವುದು ಸಿ.ಸಿ. ಟಿವಿಯಲ್ಲಿ ಮಗನ ಗಮನಕ್ಕೆ ಬಂದು ಪ್ರೀತಂ ಸುವರ್ಣ ತನ್ನ ಸಹೋದರಿ ಮೂಡುಬಿದಿರೆಯಲ್ಲಿರುವ ಪ್ರಿಯಾಗೆ ವಿಷಯ ತಿಳಿಸಿ ಸಿ.ಸಿ. ಟಿವಿ ದೃಶ್ಯ ಮುಂದಿಟ್ಟು ಪೊಲೀಸ್ ದೂರು ಕೊಡುವಂತೆ ಸೂಚಿಸಿದ್ದರು.
ಪ್ರಿಯಾ ಸುವರ್ಣ ಕಂಕನಾಡಿ ನಗರ ಪೊಲೀಸ್ ಠಾಣೆಗೆ ದೂರು ನೀಡಿ ಹಲ್ಲೆಗೀಡಾದ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ಆರೋಪಿತ ಮಹಿಳೆ ಉಮಾಶಂಕರಿಯನ್ನು ಬಂಧಿಸಿದ್ದಾರೆ.

Previous articleಗೆಲ್ಲುವ ಸೀಟನ್ನು ಎಲ್ಲರೂ ಕೇಳುತ್ತಾರೆ
Next articleಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ