ನವದೆಹಲಿ: ವೈದ್ಯಕೀಯ ವಿಮೆ ಮೇಲಿನ ಜಿಎಸ್‌ಟಿ ಹಿಂಪಡೆಯುವಂತೆ ಒತ್ತಾಯಿಸಿ ಇಂಡಿ ಮೈತ್ರಿಕೂಟದ ನಾಯಕರು ಸಂಸತ್ತಿನಲ್ಲಿ ಮಕರ ದ್ವಾರದ ಹೊರಗೆ ಪ್ರತಿಭಟನೆ ನಡೆಸಿದರು.
ಆರೋಗ್ಯ ಮತ್ತು ಜೀವ ವಿಮೆಯ ಮೇಲಿನ ಜಿಎಸ್‌ಟಿಯನ್ನು ಹಿಂಪಡೆಯುವಂತೆ ಕರೆ ನೀಡಿದರು. ಸೋಮವಾರ ರಾಜ್ಯಸಭೆಯ ಶೂನ್ಯ ವೇಳೆಯಲ್ಲಿ, ಟಿಎಂಸಿ ನಾಯಕ ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬರೆದ ಪತ್ರವನ್ನು ಪ್ರಸ್ತಾಪಿಸಿ, ಇದೇ ರೀತಿಯ ಬೇಡಿಕೆಯನ್ನು ಮಾಡಿದ್ದರು.