ವೈದ್ಯರ ನಿರ್ಲಕ್ಷ್ಯ: ಮೂರು ದಿನದ ಬಾಣಂತಿ ಸಾವು?

0
21

ಹೊಸಪೇಟೆ: ವೈದ್ಯರ ನಿರ್ಲಕ್ಷ್ಯದಿಂದ ಮೂರು ದಿನದ ಬಾಣಂತಿ ಮೃತಪಟ್ಟಿರುವ ಘಟನೆ ಹೊಸಪೇಟೆ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬುಧವಾರ ಸಂಜೆ ಜರುಗಿದೆ.
ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದ ಶಾಂತಾ (26) ಎಂಬ ಬಾಣಂತಿ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಭಾನುವಾರ ಶಾಂತಾಳನ್ನು ಅವರ ಸಂಬಂಧಿಕರು ಹೊಸಪೇಟೆ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲು ಮಾಡಿದ್ದರು. ಡಾ. ಸಿಂಧು ಅವರು ಶಾಂತಾಗೆ ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದರು. ಶಾಂತಾ ಹೆಣ್ಣು ಮಗುವನ್ನು ಹೆತ್ತಿದ್ದರು. ಹೆರಿಗೆಯಾದ ಬಳಿಕ ಬಾಣಂತಿ ಆರೋಗ್ಯದ ಮೇಲೆ ನಿಗಾ ವಹಿಸದೇ ನಿರ್ಲಕ್ಷ ತೋರಿದ ಹಿನ್ನೆಲೆಯಲ್ಲಿ ಶಾಂತಾ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾಳೆ ಎಂದು ಅವರ ಕುಟುಂಬ ಆರೋಪ ಮಾಡಿದೆ.
ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಸ್ಥಳಕ್ಕೆ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು.

Previous articleಗೋವಾ ಮಾಜಿ ಶಾಸಕರ ಕೊಲೆ ಪ್ರಕರಣ: 200 ಪುಟಗಳ ಚಾರ್ಜ್‌ಶೀಟ್
Next articleರೆಬಲ್ ಟೀಂ ಸೈಲೆಂಟ್ ಆಗಿಲ್ಲ