ಬೆಂಗಳೂರು: ವೈದ್ಯಕೀಯ ಸಿಬ್ಬಂದಿ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ವಿಶ್ವಾಸವಿಟ್ಟು ಕೆಲಸ ಮಾಡುವ ವಾತಾವರಣ ನಿರ್ಮಾಣ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.
ಚಿಕ್ಕಮಗಳೂರು ವೈದ್ಯರ ಮೇಲೆ ಹಲ್ಲೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಕರ್ತವ್ಯ ನಿರತ ವೈದ್ಯಾಧಿಕಾರಿ, ಡಾಕ್ಟರ್ ವೆಂಕಟೇಶ್ ಅವರ ಮೇಲೆ ಹಲ್ಲೆಯಾದ ಅಮಾನವೀಯ ಘಟನೆ ನಡೆದಿದೆ. ಸನ್ಮಾನ್ಯ ಗೃಹ ಸಚಿವರಾದ
ಜಿ ಪರಮೇಶ್ವರ ಇಂತಹ ನೀಚ ಕೃತ್ಯ ಎಸಗಿದವರನ್ನು ಈ ಕೂಡಲೇ ಬಂಧಿಸಿ ವೈದ್ಯಕೀಯ ಸಿಬ್ಬಂದಿಗಳ ರಕ್ಷಣೆಗೆ ಕ್ರಮ ತೆಗೆದುಕೊಳ್ಳಿ. ಕರ್ನಾಟಕ ಡಿಜಿಪಿ ಅಲೋಕ್ ಮೋಹನ್ ಅವರೇ ತಾವು ಈ ಕೂಡಲೇ ಆರೋಪಿಗಳನ್ನು ಬಂಧಿಸಿ ವೈದ್ಯಕೀಯ ಸಿಬ್ಬಂದಿ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ವಿಶ್ವಾಸವಿಟ್ಟು ಕೆಲಸ ಮಾಡುವ ವಾತಾವರಣ ನಿರ್ಮಾಣ ಮಾಡಿ ಎಂದಿದ್ದಾರೆ.