Home ನಮ್ಮ ಜಿಲ್ಲೆ ಚಿಕ್ಕಮಗಳೂರು ವೈದ್ಯಾಧಿಕಾರಿ  ಮನೆ ಮೇಲೆ ಲೋಕಾಯುಕ್ತ ದಾಳಿ

ವೈದ್ಯಾಧಿಕಾರಿ  ಮನೆ ಮೇಲೆ ಲೋಕಾಯುಕ್ತ ದಾಳಿ

0

ಚಿಕ್ಕಮಗಳೂರು: ಆದಾಯಕ್ಕಿಂತಲೂ ಅಧಿಕ ಆಸ್ತಿ ಸಂಪಾದನೆ ಆರೋಪದ ಮೇಲೆ ಕಡೂರು ವೈದ್ಯಾಧಿಕಾರಿ ಡಾ. ಎಸ್.ಎನ್ ಉಮೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪ್ರಕರಣ ದಾಖಲಿಸಿದೆ.

ಡಾಕ್ಟರ್ ಉಮೇಶ್ ಕಡೂರು ತಾಲ್ಲೂಕು ಆಡಳಿತ ವೈದ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕರ್ತವ್ಯಕ್ಕೆ ಸೇರಿದಾಗಿನಿಂದ ಇಲ್ಲಿಯವರೆಗೆ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಕಾನೂನುಬದ್ಧ ಮೂಲಗಳ ಆದಾಯಕ್ಕಿಂತ ಅಧಿಕವಾಗಿ ಭ್ರಷ್ಟಾಚಾರದಿಂದ ಹೆಚ್ಚಿನ ಪ್ರಮಾಣದಲ್ಲಿ ಸ್ಥಿರ ಹಾಗೂ ಚರ ಸ್ವತ್ತುಗಳನ್ನು ಸಂಪಾದನೆ ಮಾಡಿದ್ದಾರೆ ಎಂದು ಲೋಕಾಯುಕ್ತರು ತಿಳಿಸಿದ್ದಾರೆ.

ತಮ್ಮ ಹಾಗೂ ತಮ್ಮ ಪತ್ನಿ ಟಿ.ಎಸ್. ಮಂಜುಳ ಹಾಗೂ ಕುಟುಂಬದ ಸದಸ್ಯರ ಹೆಸರಿಗೆ ಸ್ಥಿರ ಆಸ್ತಿಯನ್ನು ಖರೀದಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಎರಡು ಜನ ಮಕ್ಕಳನ್ನು ರಾಯಚೂರು ಮತ್ತು ದಾವಣಗೆರೆಯ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿಸುತ್ತಿದ್ದು ಅಧಿಕ ಆಸ್ತಿ ಸಂಪಾದನೆ ಪ್ರಕರಣ ದಾಖಲಿಸಲಾಗಿದೆ.

Exit mobile version