Home ಅಪರಾಧ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಹತ್ಯೆ

ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಹತ್ಯೆ

0

ಧಾರವಾಡ: ಇಲ್ಲಿನ ಮರಾಠಾ ಕಾಲೋನಿಯಲ್ಲಿ ನಿಂಗಪ್ಪ ಹಡಪದ (೬೦) ಎಂಬ ವ್ಯಕ್ತಿ ಮೇಲೆ ಭೀಕರವಾಗಿ ಹಲ್ಲೆ ಮಾಡಿ ಹತ್ಯೆಗೈದ ಘಟನೆ ರವಿವಾರ ರಾತ್ರಿ ನಡೆದಿದೆ.
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಹಲ್ಲೆ ಮಾಡಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಧಾರವಾಡ ಉಪ ನಗರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಹತ್ಯೆಗೈದವರು ಯಾರು ಎಂಬ ಮಾಹಿತಿ ತಿಳಿದು ಬಂದಿಲ್ಲ. ಮೃತ ವ್ಯಕ್ತಿಯ ಬಗ್ಗೆಯೂ ಮಾಹಿತಿ ಲಭ್ಯವಾಗಿಲ್ಲ.
ರಕ್ತದ ಮಡುವಿನಲ್ಲಿ ವ್ಯಕ್ತಿಯ ಶವ ಬಿದ್ದಿರುವುದು ಮರಾಠಾ ಕಾಲನಿ ಜನರನ್ನು ಬೆಚ್ಚಿಬೀಳಿಸಿದೆ.

Exit mobile version