ಶಂಕಿತರ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ

0
13

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತ ಆರೋಪಿಗಳ ಪೋಟೋ ಬಿಡುಗಡೆ ಮಾಡಿದ್ದು ಇವರ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಘೋಷಿಸಿದೆ.
ಈ ಘಟನೆಗೆ ಸಂಬಂಧಿಸಿದಂತೆ ಎನ್‌ಐಎ ತಂಡ ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ನಂತರ, ಮಾರ್ಚ್ 28 ರಂದು ಪ್ರಕರಣದ ಸಂಚುಕೋರರಲ್ಲಿ ಒಬ್ಬನಾದ ಮುಜಾಮುಲ್ ಶರೀಫ್ ನನ್ನು ಬಂಧಿಸಿತ್ತು. ಘಟನೆಯಲ್ಲಿ ಭಾಗಿಯಾಗಿರುವ ಇತರ ಆರೋಪಿಗಳಿಗೆ ಶರೀಫ್ ಬೆಂಬಲವನ್ನು ನೀಡಿದ್ದಾನೆ ಎಂದು ಎನ್ಐಎ ಹೇಳಿದೆ.

Previous articleಓವರ್ ಹೆಡ್ ಟ್ಯಾಂಕಿನಲ್ಲಿ ಜಿಗಿದು ಯುವಕ ಆತ್ಮಹತ್ಯೆ : ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥ
Next article‘ಕಿರಾತಕ’ ಖ್ಯಾತಿಯ ಬಹುಭಾಷಾ ನಟ ಡೇನಿಯಲ್ ಬಾಲಾಜಿ ಹೃದಯಾಘಾತದಿಂದ ನಿಧನ