ವಿಗ್ರಹವಲ್ಲ ಚೈತನ್ಯದ ಹರವು
ಬೆಳಗಾವಿ: ಶತಮಾನೋತ್ಸವವು ಗಾಂಧಿ ಭಾರತಕ್ಕೆ ದಾರಿದೀಪವಾಗಲಿದೆ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದ್ದಾರೆ.
ಸುವರ್ಣ ವಿಧಾನಸೌಧದ ಅಂಗಳದಲ್ಲಿ ಪ್ರತಿಷ್ಠಾಪಿಸಿದ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣದ ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿ ಮಹಾತ್ಮಾ ಗಾಂಧೀಜಿಯ ಪ್ರತಿಮೆ ಅನಾವರಣ ಒಂದು ಅವಿಸ್ಮರಣೀಯ ಗಳಿಗೆಯಾಗಿದೆ. ವಿಗ್ರಹವಲ್ಲ ಚೈತನ್ಯದ ಹರವು ಎಂದು ಬಣ್ಣಿಸಿದ ಅವರು, ಪ್ರತಿಮೆಯು ಗಾಂಧೀಜಿ ಅನುಯಾಯಿಗಳಿಗೆ ಪ್ರೇರಣೆಯಾಗಲಿದೆ. ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವು ಗಾಂಧಿ ಭಾರತಕ್ಕೆ ದಾರಿದೀಪವಾಗಲಿದೆ ಎಂದರು.
ಗ್ರಾಮೀಣ ವಿವಿಗೆ “ಮಹಾತ್ಮಾ ಗಾಂಧೀಜಿ” ನಾಮಕರಣ: ಗದುಗಿನ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಯಲಯವನ್ನು “ಮಹಾತ್ಮಾ ಗಾಂಧೀಜಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ವಿಶ್ವವಿದ್ಯಾಲಯ” ಎಂದು ಮರುನಾಮಕರಣ ಮಾಡುವುದರ ಜತೆಗೆ ನೂತನ ಲಾಂಛನವನ್ನು ಸಮಾರಂಭದಲ್ಲಿ ಬಿಡುಗಡೆಗೊಳಿಸಲಾಯಿತು. ಕುಲಪತಿ ಡಾ.ಸುರೇಶ್ ನಾಡಗೌಡರ ಉಪಸ್ಥಿತರಿದ್ದರು.
ವಿಶೇಷ ಅಂಚೆ ಚೀಟಿ-ಕೃತಿಗಳ ಬಿಡುಗಡೆ: ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಗಾಂಧೀ ಭಾರತ ವಿಶೇಷ ಅಂಚೆ ಲಕೋಟೆಯನ್ನು ಕೂಡ ಬಿಡುಗಡೆಗೊಳಿಸಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಹೊರತರಲಾದ “ಗಾಂಧಿ ಭಾರತ-ಮರುನಿರ್ಮಾಣ” ಹಾಗೂ ಉದಯ ಕಾಲ ಸಮೂಹದ ಗಾಂಧಿ ಬಿತ್ತಿದ ಬೆಳಕು ಪುಸ್ತಕಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.