Home ಅಪರಾಧ ಶಾಲಾ ಬಸ್‌ಗೆ ಟಿಪ್ಪರ್ ಡಿಕ್ಕಿ: ೪೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಶಾಲಾ ಬಸ್‌ಗೆ ಟಿಪ್ಪರ್ ಡಿಕ್ಕಿ: ೪೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

0

ಬೆಳಗಾವಿ: ಕೊಲ್ಹಾಪುರದಿಂದ ಬೆಳಗಾವಿಗೆ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್‌ಗೆ ಶುಕ್ರವಾರ ಸಂಜೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ೪೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.
ಇಲ್ಲಿನ ಭೂತರಾಮನಹಟ್ಟಿ ಕಿರು ಮೃಗಾಲಯದ ಮುಂದೆ ಈ ಘಟನೆ ನಡೆದಿದೆ. ಕೊಲ್ಹಾಪುರದಿಂದ ಧಾರವಾಡ ವಿಶ್ವವಿದ್ಯಾಲಯ ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ಅದನ್ನು ನೋಡಿಕೊಂಡು ಮರಳಿ ಕೊಲ್ಹಾಪುರಕ್ಕೆ ತೆರಳುವ ವೇಳೆ ಮಾರ್ಗಮಧ್ಯೆ ಭೂತರಾಮನಹಟ್ಟಿ ಕಿರು ಮೃಗಾಲಯಕ್ಕೂ ಬಂದು ಕೆಲ ಹೊತ್ತು ಕಳೆದಿದ್ದಾರೆ.
ಅಲ್ಲಿಂದ ಹೊರಟು ಹೋಗುವ ವೇಳೆ ಮೃಗಾಲಯದ ಮುಂಭಾಗದಲ್ಲಿಯೇ ಶಾಲಾ ಬಸ್‌ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಬಸ್‌ನಲ್ಲಿದ್ದ ೪೦ಕ್ಕು ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ. ಯಮಕನಮರಡಿ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Exit mobile version