ಶಾಲಾ ಬಸ್ ಪಲ್ಟಿ: 25 ಕ್ಕೂ ಅಧಿಕ ಮಕ್ಕಳಿಗೆ ಗಾಯ

0
20

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲಾ ಬಸ್‌ ಪಲ್ಟಿಯಾಗಿ ಸುಮಾರು 25ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಶಾಲೆಯ ಮಕ್ಕಳನ್ನು ಕರೆದೊಯ್ಯುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದು, ಅವರನ್ನು ದುರ್ಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಭದ್ರಾವತಿ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Previous articleಎಲ್ಲರಿಗೂ ಎಲ್ಲ ಹಕ್ಕುಗಳು ಸಿಕ್ಕಿಲ್ಲ.
Next articleಸಾಹಿತಿಗಳಾದ ಗುಲ್ಜಾರ್‌, ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯಗೆ ಜ್ಞಾನಪೀಠ ಪ್ರಶಸ್ತಿ