Home ತಾಜಾ ಸುದ್ದಿ ಶಾಲೆಗೆ ಮೀಸಲಿರಿಸಿದ ಜಾಗ: ಸಿಎ ಸೈಟ್‌ನಲ್ಲಿ ನಿರ್ಮಿಸಿದ ಶಿವ ದೇವಾಲಯ ತೆರವು

ಶಾಲೆಗೆ ಮೀಸಲಿರಿಸಿದ ಜಾಗ: ಸಿಎ ಸೈಟ್‌ನಲ್ಲಿ ನಿರ್ಮಿಸಿದ ಶಿವ ದೇವಾಲಯ ತೆರವು

0

ಸರ್ಕಾರಿ ಜಾಗದಲ್ಲಿ ದೇವರ ಹೆಸರಿನಲ್ಲಿ ಸರ್ಕಾರಿ ಜಾಗವನ್ನು ಕಬಳಿಸುವ ಹುನ್ನಾರ ಮಾಡಿದ್ದಾರೆ ಎಂದು ಸರ್ಕಾರಿ ಕನ್ನಡ ಶಾಲಾ ಉಳಿಸಿ ಹೋರಾಟ ಸಮಿತಿಯ ಮುಖಂಡರು, ಹೋರಾಟಗಾರರು , ಜಿಲ್ಲಾಧಿಕಾರಿಯವರ ಗಮನಕ್ಕೆ ತಂದಿದ್ದರು

ರಾಯಚೂರು: ಸರ್ಕಾರಿ ಫ್ರೌಢ ಶಾಲೆಗೆ ಮೀಸಲಿರಿಸಿದ ಜಾಗವನ್ನು ದೇವರ ಹೆಸರಲ್ಲಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡವನ್ನು ಮಂಗಳವಾರ ಮಧ್ಯರಾತ್ರಿ ಪೊಲೀಸರು ಬಿಗಿ ಬಂದೋಬಸ್ತ್‌ನಲ್ಲಿ ತೆರವುಗೊಳಿಸಿದರು.
ನಗರದ ಚಂದ್ರಬಂಡಾ ರಸ್ತೆಯ ಎಲ್ ಬಿ ಎಸ್ ನಗರದ ಸಂತೋಷ್ ನಗರ ಬಡಾವಣೆಯಲ್ಲಿ ಅಕ್ರಮವಾಗಿ ಸಿ.ಎ.ಸೈಟ್ ನಲ್ಲಿ ನಿರ್ಮಿಸಿದ ಶಿವ ಮತ್ತು ಗಣೇಶನ ದೇವಾಲಯಗಳ ತೆರವು ಕಾರ್ಯಾಚರಣೆ ಬುಧವಾರ ಬೆಳಗಿನ ಜಾವ ಸಂತೋಷ ನಗರದಲ್ಲಿ ನಡೆದಿದೆ.
ರಾಯಚೂರು ಎ.ಸಿ ಗಜಾನನ ಬಾಳೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಮನೆ ಕಟ್ಟುವ ವೇಳೆ ಸಿಮೆಂಟ್ ಹಾಗೂ ಇತರೆ ಸಾಮಾಗ್ರಿಗಳು ಇಡಲು ಕಟ್ಟಿರುವ ಶೆಡ್ ನ್ನುದೇಗುಲ ಮಾಡಿಕೊಂಡು ಸ್ಥಳೀಯರು ಪೂಜೆ ಸಲ್ಲಿಸುತ್ತಿದ್ದರು. ದೇಗುಲದ ಸಿ.ಎ. ಸೈಟ್ 2022ಜೂನ್ 1ರಂದು ಪ್ರೌಢಶಾಲೆ ಕಟ್ಟಡಕ್ಕೆ ಮಂಜೂರು ಮಾಲಾಗಿತ್ತು. ಎಲ್ ಬಿಎಸ್ ನಗರದ ಪ್ರೌಢಶಾಲಾ ಹೆಸರಿಗೆ ಜಾಗ ಮಂಜೂರು ಮಾಡಲಾಗಿತ್ತು. ಜಾಗ ಮಂಜೂರು ಆದ ಬಳಿಕ ನಾಲ್ಕು ಕೊಠಡಿ ನಿರ್ಮಾಣಕ್ಕೆ ಅನುದಾನ ಬಿಡುಗಡೆಗಗೊಳಿಸಲಾಗಿತ್ತು. ಶಾಲೆ ಕಟ್ಟಡಕ್ಕೆ ಅನುದಾನ ಬಿಡುಗಡೆಗೊಂಡಿದ್ದರೂ ಸ್ಥಳೀಯರು ದೇಗುಲ ತೆರವಿಗೆ ವಿರೋಧ ವ್ಯಕ್ತಪಡಿಸಿದ್ದರು. ಸ್ಥಳೀಯರ ವಿರೋಧ ನಡುವೆಯೂ ‌ಪೊಲೀಸ್ ಭದ್ರತೆಯಲ್ಲಿ ದೇಗುಲ ತೆರವು ಕಾರ್ಯ ನಗರಸಭೆ ಪೌರಾಯುಕ್ತ, ಹೆಚ್ಚುವರಿ ಎಸ್ ಪಿ ಶಿವಕುಮಾರ್ ಮತ್ತು ಹರೀಶ್,
3 ಜನ ಡಿವೈಎಸ್ ಪಿಗಳು, 10ಕ್ಕೂ ಹೆಚ್ಚು ಪಿಐ, 15 ಕ್ಕೂ ಹೆಚ್ಚು ಪಿಎಸ್ಐ ಗಳು ನೂರಾರು ಪೊಲೀಸ್ ಸಿಬ್ಬಂದಿ ತೆರವು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Exit mobile version