ಮಂಡ್ಯ: ಮಳವಳ್ಳಿ ತಾಲೂಕಿನ ಬೆಳಕವಾಡಿ ಸಮೀಪದ ಸತ್ತೇಗಾಲ ಕಾವೇರಿ ನದಿ ಅಣೆಕಟ್ಟೆಯಿಂದ ರಾಮನಗರ ಜಿಲ್ಲೆಯ ನಾನಾ ಕಡೆಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಯೋಜನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಭೂಮಿ ಪೂಜೆ ನೆರವೇರಿಸಿ, ಸ್ಥಳ ಪರೀಶಿಲನೆ ನಡೆಸಿದರು. ಇದಕ್ಕೂ ಮೊದಲು ಹಿರೇನಾಗರದಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.
ಈ ವೇಳೆ ಮಾಜಿ ಸಂಸದ ಡಿ.ಕೆ. ಸುರೇಶ್, ಶಾಸಕ ಸಿ.ಪಿ.ಯೋಗೇಶ್ವರ್, ಉದಯ್ ಕದಲೂರು, ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಸುಧಾಮ್ ದಾಸ್, ಮಾಜಿ ಶಾಸಕ ಅಶ್ವಥ್, ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.