ಶಾಸಕರ ವಿರುದ್ಧ ಎಫ್‌ಐಆರ್

0
23

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರತಿಭಟನೆ ನಡೆಸಿ ಅವರ ಪ್ರತಿಕೃತಿಗೆ ಚಪ್ಪಲಿ ಏಟು ಹಾಗೂ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸೇರಿ ೧೧ ಮಂದಿ ಬಿಜೆಪಿ ಮುಖಂಡರ ವಿರುದ್ಧ ಉಡುಪಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪ್ರಾಂಶುಪಾಲರ ಪ್ರಶಸ್ತಿ ವಾಪಸ್ ಪಡೆದ ವಿಚಾರವಾಗಿ ಮಣಿಪಾಲದ ಸಿಂಡಿಕೇಟ್ ವೃತ್ತದಲ್ಲಿ ಸೆ.೬ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಹೆದ್ದಾರಿ ತಡೆದು ಬಿಜೆಪಿ ಮುಖಂಡರು ಮುಖ್ಯಮಂತ್ರಿ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಹಿಂದೂ ವಿರೋಧಿ ಸಿದ್ದರಾಮಯ್ಯ ತೊಲಗಿಸಿ ಎಂದು ಘೋಷಣೆ ಕೂಡ ಕೂಗಿದ್ದರು
ನಗರಸಭಾ ಸದಸ್ಯ ಗಿರೀಶ್ ಅಂಚನ್, ಯುವ ಮೋರ್ಚಾ ಮುಖಂಡ ಪೃಥ್ವಿರಾಜ್ ಶೆಟ್ಟಿ ಮುಖ್ಯಮಂತ್ರಿಗಳ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದರು.ಈ ಕುರಿತು ಎನ್‌ಎಸ್ಯುಐ ಮುಖಂಡ ಸೌರಭ್ ಬಲ್ಲಾಳ್ ಶಾಂತಿಭಂಗ ತರುವ ಉದ್ದೇಶದಿಂದ ಕೃತ್ಯ ಎಸೆಗಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಯಶ್ಪಾಲ್ ಸುವರ್ಣ ಎ೫ ಆರೋಪಿಯಾಗಿದ್ದಾರೆ. ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ವಿರುದ್ಧವೂ ದೂರು ನೀಡಲಾಗಿದೆ.

Previous articleಶಂಕಿತ ಡೆಂಗ್ಯೂಗೆ ಬಾಲಕಿ ಬಲಿ
Next articleಕ್ರೈಸ್ತ ಬಂಧುಗಳಿಂದ ಗಣಪನಿಗೆ ವಿಶೇಷ ಪೂಜೆ