ಬೆಂಗಳೂರು: ಈಗ ಲೋಕಸಭಾ ಚುನಾವಣೆ ಬರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕೆಂಬ ನಿಟ್ಟಿನಲ್ಲಿ ಶಾಸಕ ಜನಾರ್ದನ ರೆಡ್ಡಿ ಈಗ ಬಿಜೆಪಿಗೆ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ನಾಳೆ ಬೆಳಗ್ಗೆ ಬಿಜೆಪಿ ಕಚೇರಿಗೆ ಬರೋಕೆ ಹೇಳಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ಸಮ್ಮುಖದಲ್ಲಿ ನಾಳೆ ಬಿಜೆಪಿ ಸೇರುತ್ತೇನೆ. ಲೋಕಸಭಾ ಚುನಾವಣೆ ನಿಲ್ಲುವ ವಿಚಾರ ಇಲ್ಲ. ಮೋದಿಯವರು ಮೂರನೇ ಬಾರಿ ಪ್ರಧಾನಿ ಆಗಬೇಕು. ನಾನು ಪಕ್ಷಕ್ಕೆ ಸೇರ್ಪಡೆಯಾಗಿ ಪಕ್ಷಕ್ಕೆ ದುಡಿಯುತ್ತೇನೆ ಎಂದು ಹೇಳಿದ್ದಾರೆ.