Home News ಶಾಸಕ ರಾಜುಗೌಡರಿಗೆ ಹೃದಯಾಘಾತ: ಆರೋಗ್ಯ ಸ್ಥಿರ

ಶಾಸಕ ರಾಜುಗೌಡರಿಗೆ ಹೃದಯಾಘಾತ: ಆರೋಗ್ಯ ಸ್ಥಿರ

ತಾಳಿಕೋಟೆ: ದಿಢೀರನೇ ಹೃದಯಘಾತಕ್ಕೆ ಒಳಗಾಗಿದ್ದ ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ) ಅವರ ಆರೋಗ್ಯ ಸ್ಥಿರವಾಗಿದ್ದು ಮತಕ್ಷೇತ್ರದ ಬಂಧುಗಳು ಹಾಗೂ ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲವೆಂದು ಶಾಸಕರ ಆಪ್ತರಾದ ಮಡುಸಾಹುಕಾರ ಬಿರಾದಾರ ಅವರು ತಿಳಿಸಿದ್ದಾರೆ. ಹೃದಯಾಘಾತಕ್ಕೆ ಒಳಗಾಗಿದ್ದ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಅವರು ಆರೋಗ್ಯವಾಗಿದ್ದಾರೆ ಯಾವುದೇ ಆತಂಕಪಡುವ ಅಗತ್ಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ.

Exit mobile version