ಶಾ-ಮೋದಿ ಅಪೇಕ್ಷೆಯಂತೆ ಸ್ಪರ್ಧೆ

0
15

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಟೆಂಪಲ್ ರನ್ ಮುಂದುವರಿಸಿದ್ದಾರೆ.
ಗುರುವಾರ ದೆಹಲಿಯಿಂದ ಬಂದ ಬಳಿಕ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಈಶ್ವರಪ್ಪ, ಅಮಿತ್ ಶಾ ನನ್ನ ಭೇಟಿಯಾಗದಿರುವ ಹಿಂದಿನ ಉದ್ದೇಶ, ನೀನು ಶಿವಮೊಗ್ಗಕ್ಕೆ ವಾಪಸ್ ಹೋಗು, ಹೋಗಿ ನೀನು ಸ್ಪರ್ಧಿಸಿ ಗೆಲ್ಲು ಎಂಬ ಸಂದೇಶ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ. ಅವರ ಅಪೇಕ್ಷೆಯಂತೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ, ಗೆದ್ದು ನರೇಂದ್ರ ಮೋದಿ ಪ್ರಧಾನಿಯಾಗುವುದಕ್ಕೆ ಕೈ ಎತ್ತುತ್ತೇನೆ ಎಂದು ತಿಳಿಸಿದ್ದರು.
ಶುಕ್ರವಾರ ತೀರ್ಥಹಳ್ಳಿ ತಾಲೂಕಿನ ಅಂಬುತೀರ್ಥದಲ್ಲಿ ಶ್ರೀರಾಮೇಶ್ವರ ಸ್ವಾಮಿಯ ದರ್ಶನ ಪಡೆದು ಕಾರ್ಯಕರ್ತರ ಸಭೆ ನಡೆಸುವ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದರು.
ಚುನಾವಣೆ ಪ್ರಚಾರದ ವೇಳೆ ರಿಪ್ಪನ್‌ಪೇಟೆಯ ಶ್ರೀ ಸಿದ್ಧಿ ವಿನಾಯಕ ಸ್ವಾಮಿಯ ದರ್ಶನ ಪಡೆದರು. ಪ್ರಚಾರದ ವೇಳೆ ಸಾವಿರಾರು ಕಾರ್ಯಕರ್ತರು, ಸಾರ್ವಜನಿಕರು ಈಶ್ವರಪ್ಪರನ್ನು ಬೆಂಬಲಿಸುವುದಾಗಿ ಭರವಸೆ ನೀಡಿದರು.

Previous articleಆತಿಶಿಗೆ ಆಯೋಗದ ನೋಟಿಸ್
Next articleಘಟಪ್ರಭಾ ನದಿಗೆ ನೀರು