ಶಿಮ್ಲಾ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕೆಲವು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಂದಾಗಿ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ನಿಯಮಿತ ಆರೋಗ್ಯ ತಪಾಸಣೆಗಾಗಿ ಕರೆತರಲಾಗಿದೆ. ವೈದ್ಯರು ಅವರನ್ನು ಪರೀಕ್ಷಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗುತ್ತಿದೆ
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಪ್ರಧಾನ ಸಲಹೆಗಾರ (ಮಾಧ್ಯಮ) ನರೇಶ್ ಚೌಹಾಣ್ ಅವರು ಈ ಬೆಳವಣಿಗೆಯನ್ನು ಮಾಧ್ಯಮಗಳಿಗೆ ದೃಢಪಡಿಸಿದ್ದಾರೆ.