ಶಿರಸಿ-ಕುಮಟಾ ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತ

ಕಾರವಾರ: ಉತ್ತರ ಕನ್ನಡದಲ್ಲಿ ಮಳೆ ಆರ್ಭಟ ಮತ್ತೆ ಜೋರಾಗಿದೆ. ಭಾನುವಾರ ಜಿಲ್ಲೆಯಲ್ಲಿ ದಿನವಿಡಿ ಮಳೆಯಾಗಿದ್ದು, ಶಿರಸಿ ಕುಮಟಾ ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ.
ಘಟ್ಟದ ಮೇಲ್ಭಾಗದ ಶಿರಸಿ, ಸಿದ್ದಾಪುರ ಭಾಗದಲ್ಲಿಯೂ ದಿನವಿಡಿ ಮಳೆಯಾಗಿದೆ. ಶಿರಸಿ ಕುಮಟಾ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತವಾಗಿ ಈ ಭಾಗದಲ್ಲಿ ಕಲ್ಪಿಸಿದ್ದ ಲಘುವಾಹನ ಸಂಚಾರ ಕೂಡ ಸ್ಥಗಿತಗೊಂಡಿತ್ತು. ಮುಂಜಾನೆಯಿಂದಲೇ ಗುತ್ತಿಗೆ ಪಡೆದಿರುವ ಕಂಪೆನಿ ಜಿಸಿಬಿ ಟಿಪ್ಪರ್ ಬಳಸಿ ಹೆದ್ದಾರಿಗೆ ಬಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯದಲ್ಲಿ ತೊಡಗಿದೆ.
ಹೆದ್ದಾರಿ ಅಗಲೀಕರಣಕ್ಕಾಗಿ ಗುಡ್ಡ ತೆರವು ಮಾಡಿದ್ದು ಕಳೆದ ಮೂರು ದಿನಗಳಿಂದ ನಿತ್ಯವೂ ಗುಡ್ಡ ಕುಸಿತವಾಗುತ್ತಿದೆ. ಹೆದ್ದಾರಿ ಹಾಗೂ ಅಭಿವೃದ್ಧಿ ಕಾಮಗಾರಿ ನಡೆಸಿ ಪ್ರದೇಶಗಳಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಹವಮಾನ ಇಲಾಖೆ ಜೂ. 18ರವರೆಗೂ ರೆಡ್ ಅಲರ್ಟ್ ಘೋಷಿಸಿದೆ.