ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ

0
22
ಮೋದಿ

ಶಿವಮೊಗ್ಗ: ನಾಲ್ಕು ಲೋಕಸಭಾ ಕ್ಷೇತ್ರಗಳ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ಮೋದಿ ಮಾ. ೧೮ರಂದು ಶಿವಮೊಗ್ಗಕ್ಕೆ ಆಗಮಿಸಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ನಗರದ ಯುವ ಅಲ್ಲಮಪ್ರಭು ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು ಮಧ್ಯಾಹ್ನ ೧.೧೫ಕ್ಕೆ ಆಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ದಾವಣಗೆರೆ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ಮಂಗಳೂರಿನ ಬ್ರಿಜೇಶ್ ಚೌಟ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಸಿಎಂ ಬಿಎಸ್‌ವೈ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆರಗ ಜ್ಞಾನೇಂದ್ರ, ಸಿ.ಟಿ.ರವಿ, ಜೆಡಿ ಎಸ್ ಶಾಸಕರು ವೇದಿಕೆ ಮೇಲೆ ಇರಲಿದ್ದಾರೆ. ಪೆಂಡಾಲ್‌ಗೆ ನರೇಂದ್ರ ಮೋದಿ ಅವರು ತೆರೆದ ವಾಹನದಲ್ಲಿ ಬರಲಿದ್ದಾರೆ.

Previous articleಶಶೀಲ್ ನಮೋಶಿಗೆ 115 ಮತಗಳಿಂದ ಗೆಲುವು
Next articleಮತ ಭಿಕ್ಷೆಗೆ ಬಂದವರನ್ನು ನೇರವಾಗಿ ಪ್ರಶ್ನಿಸಿ