Home News ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆ

ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆ

ಶಿವಮೊಗ್ಗ: ಜಿಲ್ಲೆಯಲ್ಲಿ ಮೊದಲ ಕೊರೊನಾ ಪ್ರಕರಣ ದೃಢಪಟ್ಟಿದೆ.
೭೫ ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾವೇರಿ ಜಿಲ್ಲೆಯ ವೃದ್ಧ ಮೇ ೧೯ರಂದು ಹೃದಯ ಸಂಬಂಧಿ ಕಾಯಿಲೆಯಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ‌ ಏಳು ದಿನ ಚಿಕಿತ್ಸೆ ಪಡೆದಿದ್ದ ಅವರಿಗೆ ಕಫ ಇದ್ದ ಕಾರಣ ಕರೊನಾ‌ ಟೆಸ್ಟ್ ಒಳಪಡಿಸಲಾಗಿತ್ತು. ಸೋಮವಾರ ವೃದ್ಧನಿಗೆ ಕರೊನಾ ಪಾಸಿಟಿವ್ ತಗುಲಿರುವುದು ಧೃಢಪಟ್ಟಿದೆ. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದಿದ್ದ ವೃದ್ಧ ಗುಣಮುಖರಾಗಿ ಆಸ್ಪತ್ರೆಯಿಂದ ಸೋಮವಾರವಷ್ಟೆ ಬಿಡುಗಡೆಗೊಂಡು ಮನೆಗೆ ಹೋಗಿದ್ದರು. ಆದರೆ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆ ಸೇರಿದ ಬಳಿಕ ಕರೊನಾ ದೃಢಪಟ್ಟಿರುವುದ ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಸ್ಪಷ್ಟಪಡಿಸಿರುವ ಡಿಎಸ್ ಒ ಡಾ. ನಾಗರಾಜ ನಾಯ್ಕ, ವೃದ್ಧನಿಗೆ ಕರೊನಾ ತಗುಲಿರುವುದು ನಿಜ. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದು‌ ಮನೆಗೆ ಮರಳಿದ ಬಳಿಕ ಸೋಂಕು ದೃಢಪಟ್ಟಿದೆ. ಹಾವೇರಿ ಜಿಲ್ಲೆಯ ಡಿಎಚ್ಒ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

Exit mobile version