Home News ಶಿವಮೊಗ್ಗ| ಭೀಕರ ರಸ್ತೆ ಅಪಘಾತ: ಮೂವರು ಸಾವು, ಮೂವರ ಸ್ಥಿತಿ ಗಂಭೀರ

ಶಿವಮೊಗ್ಗ| ಭೀಕರ ರಸ್ತೆ ಅಪಘಾತ: ಮೂವರು ಸಾವು, ಮೂವರ ಸ್ಥಿತಿ ಗಂಭೀರ

ಶಿವಮೊಗ್ಗ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಟ್ರೀ ಪಾರ್ಕ್‌ನ ಲಯನ್ ಸಫಾರಿ ಬಳಿ ದುರ್ಘಟನೆ ಸಂಭವಿಸಿದ್ದು. ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ. ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕಾರುಗಳ ಭಾಗಗಳನ್ನು ತೆರವು ಮಾಡಲಾಗಿದೆ. ಅತಿ ವೇಗ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version