ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ತಮಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘಿಸಲಾಗಿದೆ. ಈ ಬಗ್ಗೆ ಸಂಸತ್ತಿನಲ್ಲಿ ಹಕ್ಕುಚ್ಯುತಿ ಮಂಡಿಸುವುದಾಗಿ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಶುಕ್ರವಾರ ದಿಶಾ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ತಾವು ಬೆಳಗಾವಿ ಸಂಸದರಾಗಿದ್ದು ಅಭಿವೃದ್ಧಿಗೆ ಪೂರಕವಾದ ವ್ಯಕ್ತಿ ಇದ್ದೇನೆ. ಆದರೆ ಗ್ರಾಮೀಣ ಕ್ಷೇತ್ರದ ಹಲವು ಗ್ರಾಮಗಳಲ್ಲಿ ನಮ್ಮನ್ನು ಬಿಟ್ಟು ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಶಿಷ್ಟಾಚಾರ ಉಲ್ಲಂಘಿಸಿ ನನ್ನ ಹಕ್ಕಿಗೆ ಉಲ್ಲಂಘನೆ ತಂದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದರು.
ಅಧಿಕಾರಿಗಳು ಇಲ್ಲದೆಯೇ ಕಾಮಗಾರಿ ಪೂಜೆ ಆಗಿದ್ದನ್ನೂ ಗಮನಿಸಿದ್ದೇನೆ. ಅಭಿವೃದ್ಧಿ ಕಾರ್ಯದಲ್ಲಿ ರಾಜಕಾರಣ ಮಾಡಬಾರದು. ಎಲ್ಲರೂ ಸೇರಿ ಒಟ್ಟಾಗಿ ಭೂಮಿಪೂಜೆ, ಅಭಿವೃದ್ಧಿ ಮಾಡೋಣ. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಅನುಷ್ಠಾನವಾಗುತ್ತಿಲ್ಲ ಎಂದು ಆರೋಪಿಸಿದರು.