Home ತಾಜಾ ಸುದ್ದಿ ಶೀಘ್ರದಲ್ಲೇ ಮತ್ತೊಂದು ಗ್ಯಾರಂಟಿ ಘೋಷಣೆ

ಶೀಘ್ರದಲ್ಲೇ ಮತ್ತೊಂದು ಗ್ಯಾರಂಟಿ ಘೋಷಣೆ

0

ರಾಮನಗರ: ಶೀಘ್ರದಲ್ಲೇ ಸರ್ಕಾರದ 6ನೇ ಗ್ಯಾರಂಟಿ ಘೋಷಣೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.
ಮಾಗಡಿ ಕೋಟೆ ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ 6ನೇ ಗ್ಯಾರಂಟಿ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗಾಗಿ ಜಾರಿ ಮಾಡುವ ಕುರಿತು ಸಿಎಂ, ಡಿಸಿಎಂ ಜೊತೆ ಚರ್ಚಿಸಿ ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಹೇಳಿದರು.

Exit mobile version