Home News ಶೀಘ್ರ 11 ಸಾವಿರ ಶಿಕ್ಷಕರ ನೇಮಕ

ಶೀಘ್ರ 11 ಸಾವಿರ ಶಿಕ್ಷಕರ ನೇಮಕ

ಶಿವಮೊಗ್ಗ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಸದ್ಯದಲ್ಲೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಇತರೆಡೆ ಅನುದಾನಿತ ಶಿಕ್ಷಕರು 7 ಸಾವಿರ ಸೇರಿದಂತೆ ಸುಮಾರು 17ರಿಂದ 18 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ ಎಂದರು.
ಅಲ್ಲದೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಫಲಿತಾಂಶ ಸುಧಾರಣೆಗಾಗಿ ಒಂದಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಮುಂದಿನ ವರ್ಷ ಆ ಭಾಗದ ಫಲಿತಾಂಶದಲ್ಲಿ ಉತ್ತಮ ಸುಧಾರಣೆ ಕಂಡುಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
೨೦೨೪-೨೫ರ ಪರೀಕ್ಷೆ 1ರ ಫಲಿತಾಂಶವು ಕಳೆದ ಸಾಲಿಗಿಂತ ಶೇ. 8.5ರಷ್ಟು ಅಧಿಕವಾಗಿದೆ. ಈ ವರ್ಷ ಶೇ. 75ರಷ್ಟು ವಿದ್ಯಾರ್ಥಿಗಳು ಪ್ರಥಮ ದರ್ಜೆ(ಶೇ. 60) ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ್ದಾರೆ. ಕಳೆದ ವರ್ಷ ಶೇ. 54ರಷ್ಟು ವಿದ್ಯಾರ್ಥಿಗಳು ಪ್ರಥಮ ದರ್ಜೆ ಪಡೆದಿದ್ದರು.
ಉತ್ತಮ ಫಲಿತಾಂಶ ಬರಲು ಇಲಾಖೆಯಲ್ಲಿ ಸಾಕಷ್ಟು ಬದಲಾವಣೆಯನ್ನು ಈ ಬಾರಿ ತರಲಾಗಿತ್ತು. ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಸಂಜೆ ಹೊತ್ತು ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲಾಗಿತ್ತು. ಅಣಕು ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲಾಗಿತ್ತು ಎಂದು ತಿಳಿಸಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಂದೇ ಪರೀಕ್ಷೆ-2 ಬರೆಯಲು ನೋಂದಣಿ ಆರಂಭಿಸಿದ್ದು ಅಂದೇ ಪರೀಕ್ಷೆ 2 ಮತ್ತು ಪರೀಕ್ಷೆ 3ರ ದಿನಾಂಕಗಳನ್ನು ಪ್ರಕಟಿಸಲಾಗಿದೆ ಎಂದರು.

Exit mobile version