ಶೆಟ್ಟರ್ ಪಕ್ಷ ಸೇರುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ

0
11

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಪಕ್ಷ ಸೇರುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ನೋಡಿಲ್ಲ. ಪಕ್ಷ ಯಾವುದೇ ತೀರ್ಮಾನ ಕೈಗೊಂಡರು ನಾನು ಸ್ವಾಗತಿಸುತ್ತೇನೆ ಎಂದರು. ಶೆಟ್ಟರ್ ಅವರು ದೆಹಲಿಯಲ್ಲಿ ಪಕ್ಷದ ಕಚೇರಿಗೆ ತೆರಳಿದ್ದಾರೆ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಏನೇ ತೀರ್ಮಾನ ಕೈಗೊಂಡರೂ ಅದಕ್ಕೆ ಬದ್ಧನಾಗಿರುತ್ತೇನೆ. ಸಂಪೂರ್ಣ ಮಾಹಿತಿ ಇಲ್ಲದೇ ನಾನು ಮಾತನಾಡುವುದಿಲ್ಲ ಎಂದು ಹೇಳಿದರು. ಪಕ್ಷಕ್ಕೆ ಯಾವುದೇ ವ್ಯಕ್ತಿ ಅನೀವಾರ್ಯತೆ ಎಂಬುದು ಇಲ್ಲ. ಬಿಜೆಪಿ ಬಲಿಷ್ಠ ಪಕ್ಷ. ಮೂರೇ ತಿಂಗಳಿಗೆ ಶೆಟ್ಟರ್ ಅವರಿಗೆ ಕಾಂಗ್ರೆಸ್ ಬೇಸರವಾದ ಕುರಿತು ನನಗೆ ಗೊತ್ತಿಲ್ಲ ಅವರನ್ನೆ ಕೇಳಬೇಕು ಎಂದರು.

Previous articleಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಹಳೇ ಪಿಂಚಣಿ ಯೋಜನೆ ಜಾರಿ
Next articleಧಾರವಾಡ ಸ್ಟೇಟಸ್ ಪ್ರಕರಣ: ಈದ್ಗಾ ಗುಂಬಜ್ ಕೆಡವಿದ ಉದ್ರಿಕ್ತರು