ಢಾಕಾ: ಬಾಂಗ್ಲಾದೇಶದಲ್ಲಿ ಕಳೆದ ತಿಂಗಳು ನಡೆದ ಹಿಂಸಾತ್ಮಕ ಘರ್ಷಣೆಯ ಸಮಯದಲ್ಲಿ ಕಿರಾಣಿ ಅಂಗಡಿ ಮಾಲೀಕನ ಸಾವಿನ ಹಿನ್ನೆಲೆಯಲ್ಲಿ ಶೇಖ್ ಹಸೀನಾ ಮತ್ತಿತರ ಆರು ಜನರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ.

ಕಿರಾಣಿ ಅಂಗಡಿಯ ಕೆಲಸಗಾರನ ಸಾವಿನ ನಡುವೆ ಉದ್ಯೋಗ ಕೋಟಾದ ವ್ಯಾಪಕ ಪ್ರತಿಭಟನೆಯ ಸಂದರ್ಭದಲ್ಲಿ ರಾಜೀನಾಮೆ ನೀಡಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದ್ದಾರೆ. ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ. ಪ್ರತಿಭಟನೆಗಳು ಪ್ರಾರಂಭವಾಗುವ ಮೊದಲೇ ವಿವಾದಗಳಲ್ಲಿ ಮುಳುಗಿರುವ 76 ವರ್ಷದ ನಾಯಕಿ ಶೇಖ್ ಹಸೀನಾ ಅವರ ವಿರುದ್ಧ ದಾಖಲಾದ ಮೊದಲ ಪ್ರಕರಣ ಇದಾಗಿದೆ.