Home ನಮ್ಮ ಜಿಲ್ಲೆ ಶ್ರೀ ರಾಮ ಪ್ರಾಣ ಪ್ರತಿಷ್ಠೆ: ಹೆಚ್.ಡಿ.ಕುಮಾರಸ್ವಾಮಿಗೆ ಆಹ್ವಾನ

ಶ್ರೀ ರಾಮ ಪ್ರಾಣ ಪ್ರತಿಷ್ಠೆ: ಹೆಚ್.ಡಿ.ಕುಮಾರಸ್ವಾಮಿಗೆ ಆಹ್ವಾನ

0

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚಿತ್ರ ಸಹಿತ ಪೋಸ್ಟ್‌ ಮಾಡಿರುವ ಅವರು ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ಶ್ರೀ ರಾಮ ಲಾಲ್ ಅವರು ಹಾಗೂ ಇತರರು ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಪರವಾಗಿ ಆಹ್ವಾನ ನೀಡಿದರು. ನನ್ನನ್ನು ಆಹ್ವಾನಿಸಿದ ಅವರೆಲ್ಲರಿಗೂ ಧನ್ಯವಾದಗಳು. ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಹಾಗೂ ಶ್ರೀರಾಮ ಸೇವಾ ಕೈಂಕರ್ಯದಲ್ಲಿ ಕುಟುಂಬ ಸಮೇತವಾಗಿ ಸಂತೋಷದಿಂದ ಭಾಗಿಯಾಗುತ್ತೇನೆ ಎಂದು ಬರೆದುಕೊಂಡಿದ್ದಾರೆ

Exit mobile version