Home ನಮ್ಮ ಜಿಲ್ಲೆ ಚಿಕ್ಕಮಗಳೂರು ಶ್ರೀ ರಾಮ ಸೇನೆಯ ಮೂವರ ಬಂಧನ

ಶ್ರೀ ರಾಮ ಸೇನೆಯ ಮೂವರ ಬಂಧನ

0

ಚಿಕ್ಕಮಗಳೂರು: ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ನಡೆಸುವುದಾಗಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರಂಜಿತ್ ಶೆಟ್ಟಿ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಡಳಿತ ನಿಷೇಧದ ನಡುವೆ ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ಆಚರಣೆಗೆ ಮುಂದಾಗಬಹುದಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರಂಜಿತ್ ಶೆಟ್ಟಿ ಹಾಗೂ ಇತರನ್ನು ಬಂಧಿಸಿರುವ ಪೊಲೀಸರು ಗೌಪ್ಯಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ಹೇಳಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಅವರನ್ನು ಜ.5ರ ವರೆಗೆ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

Exit mobile version