ಸಂಘಟಿತ ಪ್ರದರ್ಶನ: ಈ ಸಲ ಕಪ್ ನಮ್ದೆ……✌

0
12

ಬೆಂಗಳೂರು: ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಆರ್‌ಸಿಬಿ ಅಭಿಮಾನಿಗಳು ಕನಸು ನನಸಾಗಿಸಿದ ವನಿತೆಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್ ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು.
ಈ ಸಲ ಕಪ್ ನಮ್ದೆ……✌ ಎಂದಿದ್ದಾರೆ

Previous articleಶೆಟ್ಟರ್ ಬದಲಾವಣೆಗೆ ಕೊನೇಕ್ಷಣದ ಕಸರತ್ತು..
Next articleಮದುವೆ ಮಾಡೋದಿದ್ರೆ ಹುಷಾರ್ ಸ್ವಾಮಿ…!